ದೂರಸಂಪರ್ಕ ಸುಧಾರಣೆಗೆ ಆದ್ಯತೆ

ದೂರಸಂಪರ್ಕ ಸುಧಾರಣೆಗೆ ಆದ್ಯತೆ

ಬೆಂಗಳೂರು : ವರ್ಕ್ ಫ್ರಮ್ ಎನಿವೇರ್’ ಎಂಬ ಪರಿಕಲ್ಪನೆ ಜನಪ್ರಿಯವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ದೂರಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಂಬAಧಿಸಿದ ಭಾಗೀದಾರರೊಂದಿಗೆ ಶೀಘ್ರ ಸಭೆ ಕರೆದು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸರ್ಕಾರಿ ವಲಯ ಹಾಗೂ ಖಾಸಗಿ ವಲಯದ ದೂರಸಂಪರ್ಕ ಜಾಲ ಸುಧಾರಣೆಯಿಂದ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಾರ್ಯನಿರ್ವಹಣೆಯ ವೇಗ ಹೆಚ್ಚಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದು ಬಿಎಸ್‌ವೈ ತಿಳಿಸಿದರು.

ಕೋವಿಡ್ 19 ರ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಉದ್ಯಮದವರ ಸಂಪರ್ಕದಲ್ಲಿದ್ದು ನೈತಿಕ ಬೆಂಬಲ ಸೂಚಿಸಿದ್ದಾರೆ. ಹಲವು ಸ್ಟಾರ್ಟಪ್ ಗಳು ಕೋವಿಡ್ ಲಾಕ್ ಡೌನ್ ಸಂದರ್ಭಗಳಲ್ಲಿ ಜನರಿಗೆ ನೆರವಾಗಲು ಹಾಗೂ ಕೋವಿಡ್ ನಿರ್ವಹಣೆಗೆ ಮಹತ್ತರ ಕೊಡುಗೆ ನೀಡಿರುವುದನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

Related