ಹ್ಯಾಟ್ರಿಕ್ ಗೆಲುವು ಸಾಧಿಸಿದ ಪ್ರಿಯಾಂಕ್ ಖರ್ಗೆಗೆ

ಹ್ಯಾಟ್ರಿಕ್ ಗೆಲುವು ಸಾಧಿಸಿದ ಪ್ರಿಯಾಂಕ್ ಖರ್ಗೆಗೆ

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ಎದುರಾಳಿ ಮಣಿಕಂಠ ರಾಠೋಡ್ ಅವರನ್ನು 13,638 ಮತಗಳ ಅಂತರದಿಂದ ಮಣಿಸಿದ್ದಾರೆ.

ಪ್ರಿಯಾಂಕ್ ಖರ್ಗೆ 81,088 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಎರಡು ಬಾರಿ ಶಾಸಕರಾದವರು. ಮೊದಲನೇ ಬಾರಿ ಶಾಸಕರಾಗಿ ಆಯ್ಕೆ ಆದಾಗಲೇ ಸಚಿವರಾಗಿ ಸೇವೆ ಸಲ್ಲಿಸಿದ ಹಿರಿಮೆ ಅವರದ್ದಾಗಿದೆ. ಈಗ ಮೂರನೇ ಬಾರಿಗೆ ಗೆಲುವನ್ನು ಬರೆದಿದ್ದಾರೆ. ಕಲಬುರಗಿಯ 9 ಕ್ಷೇತ್ರಗಳಲ್ಲಿ 7 ಸ್ಥಾನವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

 

Related