ಕಿಚ್ಚ ʼಕೈʼ ಪರ ಪ್ರಚಾರ! – ಡಿಕೆಶಿ

ಕಿಚ್ಚ ʼಕೈʼ ಪರ ಪ್ರಚಾರ! – ಡಿಕೆಶಿ

ಬೆಂಗಳೂರು: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸಿನಿ ಸ್ಟಾರ್ಗಳ ಅಬ್ಬರದ ಪ್ರಚಾರ ಜೋರಾಗಿದ್ದು, ಸುದೀಪ್ ಮತ್ತು ದರ್ಶನ್ ನಂತಹ ದೊಡ್ಡ ದೊಡ್ಡ ಸ್ಟಾರ್ ಗಳು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ.

ಹೌದು, ಕನ್ನಡ ಚಕ್ರವರ್ತಿ ಕಿಚ್ಚ ಸುದೀಪ್ ಈಗಾಗಲೇ ಬಿಜೆಪಿ ಪಕ್ಷದ ಪರವಾಗಿ ಹಲವಾರು ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ.

ಅದರಂತೆಯೇ ಕಾಂಗ್ರೆಸ್ ಪಕ್ಷದಲ್ಲೂ ಸಹ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬ ಮಾಹಿತಿ ಲಭ್ಯವಾಗುತ್ತಿರುವುದರಿಂದ ಡಿಕೆ ಶಿವಕುಮಾರ್ ಅವರು ಕಿಚ್ಚ ಸುದೀಪ್ ಅವರ ಜೊತೆ ಮಾತನಾಡಿದ್ದಾರೆ ಎಂದು ತಿಳಿದುಬರುತ್ತದೆ

ಬಿಜೆಪಿ ಪರವಾಗಿ ಕನ್ನಡ ಸಿನಿಮಾ ನಟರು ಪ್ರಚಾರ ನಡೆಸುತ್ತಿರುವುದಕ್ಕೆ ಪ್ರತಿಕ್ರಿಯಿಸಿ ಡಿಕೆ. ಶಿವಕುಮಾರ್ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಕಿಚ್ಚ ಒಪ್ಪಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ಈಗಾಗಲೇ ಸುದೀಪ್ ಪ್ರಚಾರ ಕಣದಲ್ಲಿದ್ದಾರೆ. ನೆಚ್ಚಿನ ನಟನನ್ನು ನೋಡಲು ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಕಿಚ್ಚ ಅವರು ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಹೇಳಿಕೆ ಕೊಟ್ಟಿದ್ದಾರೆ ಎನ್ನುವ ಸುದ್ದಿಯೊಂದು ವೈರಲ್ ಆಗಿದೆ. ಇದನ್ನು ತಿಳಿದು ನೆಟ್ಟಿಗರೂ ಕೂಡಾ ಶಾಕ್ ಆಗಿದ್ದಾರೆ. ಕಿಚ್ಚನ ಅಭಿಮಾನಿಗಳಿಗೂ ಇದು ಸಪ್ರೈಸಿಂಗ್ ಆಗಿದೆ.

 

Related