ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

ಹಾವೇರಿ : ಮಾಸಿಕ 12 ಸಾವಿರ ಗೌರವ ಧನ, ಉಚಿತ ಚಿಕಿತ್ಸೆ ಹಾಗೂ ರಕ್ಷಣಾ ಸಾಮಗ್ರಿಗಳ ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಆಶಾ ಕಾರ್ಯಕರ್ತೆಯರ ಸಂಘದಿಂದ ಹಲವಾರು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಅಲ್ಲದೇ ಈವರೆಗೂ ಸಂಘದ ಪದಾಧಿಕಾರಿಗಳ ಜೊತೆಯಲ್ಲಿ ಸಭೆಯನ್ನು ನಡೆಸಿಲ್ಲ. ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ತುಂಬಾ ಗಂಭೀರವಾಗಿದ್ದ, ಆಶಾ ಕಾರ್ಯಕರ್ತೆಗೆ ಬಿಡಿಬಿಡಿಯಾಗಿ ಮಾಸಿಕ ಸರಾಸರಿ 8 ರಿಂದ 9 ಸಾವಿರ ಪ್ರೋತ್ಸಾಹ  ಧನ ನೀಡಲಾಗುತ್ತದೆ.

ಆದರೆ ಈ ಎಲ್ಲಾ ಚಟುವಟಿಕೆಗಳನ್ನು ಬಿಡಿಬಿಡಿಯಾಗಿ ಪೋರ್ಟಲ್‌ನಲ್ಲಿ ಎಂಟ್ರಿ ಮಾಡಬೇಕಾಗಿರುವುದರಿಂದ ಈ ಹಣ ಸರಿಯಾಗಿ ತಲುಪುತ್ತಿಲ್ಲ ಎಂದು ಹೇಳಿದರು. ಆಶಾ ಕಾರ್ಯಕರ್ತೆರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ ಜು.10 ರಿಂದ ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆಯನ್ನು ನಿಲ್ಲಿಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿ ಮನವಿ ಸಲ್ಲಿಸಲಾಯಿತು.

Related