ರೈತಪರ ಸಂಘಟನೆಗಳಿಂದ ಪ್ರತಿಭಟನೆ

ರೈತಪರ ಸಂಘಟನೆಗಳಿಂದ ಪ್ರತಿಭಟನೆ

ಕೊಪ್ಪಳ : ಕೊಪ್ಪಳ ತಾಲೂಕಿನ ಹಿಟ್ನಾಳ ಟೋಲ್ ಗೇಟ್‌ನ ರಾಷ್ಟ್ರೀಯ ಹೆದ್ದಾರಿ-13 ರಸ್ತೆ ಬಳಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಆಪ್, ಸಿಐಟಿಯು, ರೈತಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಬೇಕು. ಸರ್ಕಾರ ಮೂರು ಕಾಯ್ದೆ ಜಾರಿ ಮಾಡುವ ಮೂಲಕ ರೈತರ ಬದುಕಿಗೆ ಕುತ್ತು ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ರೈತರ ಹಿತ ಕಾಯುವುದನ್ನ ಬಿಟ್ಟು ಉಳಿದೆಲ್ಲವನ್ನ ಮಾಡುತ್ತಿದ್ದಾರೆ ಎಂದರು.

ಕಾಯ್ದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ರೈತರು ಮಳೆ, ಚಳಿ, ಬಿಸಿಲು ಎನ್ನದೆ ಹೋರಾಟ ಮಾಡುತ್ತಿವೆ. ಕೇಂದ್ರ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲ. ಕೂಡಲೇ ಮೂರು ಕಾಯ್ದೆ ಹಿಂಡೆಯಬೇಕು ಎಂದು ಒತ್ತಾಯಿಸಿ ರಸ್ತೆ ಬಳಿ ಪ್ರತಿಭಟನೆ ನಡೆಸಿದರು.

ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಪ್ರತಿಭಟನೆ ನಡೆಯಿತು.

Related