ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ; ರಾಹುಲ್ ಪೊಲೀಸ್ ವಶಕ್ಕೆ

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ; ರಾಹುಲ್ ಪೊಲೀಸ್ ವಶಕ್ಕೆ

ನವದೆಹಲಿ ಆ5: ಎಐಸಿಸಿ ನಾಯಕ ರಾಹುಲ್‌ ಗಾಂಧಿ, ಶಶಿ ತರೂರ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರನ್ನು ನವದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ವೇಳೆ ದೆಹಲಿ ಪೊಲೀಸರು ಅವರುಗಳನ್ನು ವಶಕ್ಕೆ ಪಡೆದಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ರಾಹುಲ್‌ ಗಾಂಧಿ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರಿಸುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಿಜೆಪಿ ನಾಶಪಡಿಸುತ್ತಿದೆ ಎಂದು ಆರೋಪಿಸಿದ್ದರು.

Related