ಪಿಎಸ್ಐ ನೇಮಕಾತಿ ಅಕ್ರಮ ಹಣ ಲೂಟಿ – ಅಶೋಕ್ ವಿರುದ್ಧ ಸಿದ್ಧು ಆರ

ಪಿಎಸ್ಐ ನೇಮಕಾತಿ ಅಕ್ರಮ ಹಣ ಲೂಟಿ – ಅಶೋಕ್ ವಿರುದ್ಧ ಸಿದ್ಧು ಆರ

ಮೊದಲ ಬಾರಿಗೆ ಅಶೋಕ್ ಹೆಸರನ್ನು ಸಿದ್ದರಾಮಯ್ಯ ಉಲ್ಲೇಖಿಸಿ ಆರೋಪಿಸಿದರು. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ದುಡ್ಡು ವಸೂಲಿ ಮಾಡಿದ್ದಾರೆ ಎಂದ ಕಿಡಿಕಾರಿದರು.

ಬೆಂಗಳೂರು, ಜು 11 : ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಭಾಗಿಯಾಗಿದ್ದಾರೆ ಎಂದು ಆರೋಪ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಮೊದಲ ಬಾರಿಗೆ ಅಶೋಕ್ ಹೆಸರನ್ನು ಸಿದ್ದರಾಮಯ್ಯ ಉಲ್ಲೇಖಿಸಿ ಆರೋಪಿಸಿದರು. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ದುಡ್ಡು ವಸೂಲಿ ಮಾಡಿದ್ದಾರೆ ಎಂದ ಕಿಡಿಕಾರಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾಲದಲ್ಲಿ ಭಾರತದ ಆರ್ಥಿಕತೆಯಲ್ಲಿ 103ನೇ ಸ್ಥಾನದಲ್ಲಿತ್ತು. ಈಗ 144ನೇ ಸ್ಥಾನಕ್ಕೆ ಹೋಗಿದೆ. ಇದೇ ಪ್ರಧಾನಿ ಮೋದಿ ಸರ್ಕಾರದ ಸಾಧನೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಯುವ ಕಾಂಗ್ರೆಸ್ ವತಿಯಿಂದ ಆಯೋಜಿರುವ ಅರಮನೆ ಮೈದಾನದಲ್ಲಿ ನಡೆದ ಯುವ ಜನೋತ್ಸವ ರಾಜ್ಯ ಕಾರ್ಯಕಾರಣಿಯಲ್ಲಿ ಭಾಷಣದ ವೇಳೆ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಟೀಕಿಸಿದರು.

ನಮ್ಮ ದೇಶದಲ್ಲಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯವ ಜನತೆ 60% ಇದ್ದಾರೆ. ಜಗತ್ತಿನ ಯಾವ ದೇಶದಲ್ಲೂ ಇಷ್ಟು ಯುವಶಕ್ತಿ ಇಲ್ಲ, ಯುವಶಕ್ತಿಯನ್ನು ನಾವು ಬಳಸಿಕೊಳ್ಳಬೇಕು. ಆಗ ಮಾತ್ರ ದೇಶವನ್ನು ಕಟ್ಟೋಕೆಸಾಧ್ಯವಾಗುತ್ತದೆ. ನಮ್ಮ ದೇಶದಲ್ಲಿ ಯುವ ಶಕ್ತಿ ಬಳಸಿಕೊಳ್ತಿಲ್ಲ, ಅದರಲ್ಲೂ ಮೋದಿ ಪ್ರಧಾನಿಯಾದ ಬಳಿಕ ಸರಿಯಾಗಿ ಬಳಸಿಕೊಳ್ತಿಲ್ಲ. ಯುವಕರಿಂದ ಕೆಲಸವನ್ನು ತೆಗೆಸುತ್ತಿಲ್ಲ, ಯುವಕರಿಗೆ ಉದ್ಯೋಗಗಳನ್ನು ಕೊಡುತ್ತಿಲ್ಲ ಎಂದು ಆಪಾದಿಸಿದರು.

Related