ನಾಳೆ ಹೊಸಪೇಟೆಯಲ್ಲಿ ಅಪ್ಪುರವರ ಪುಸ್ಥಳಿ ಉದ್ಘಾಟನೆ.

ನಾಳೆ ಹೊಸಪೇಟೆಯಲ್ಲಿ ಅಪ್ಪುರವರ ಪುಸ್ಥಳಿ ಉದ್ಘಾಟನೆ.

ಪುನೀತ್ ರಾಜ್ ಕುಮಾರ್ ಅಗಲಿಗೆ ಏಳು ತಿಂಗಳು ಕಳೆದರೂ, ಅವರ ಆರಾಧನೆ ಮಾತ್ರ ಇನ್ನೂ ನಿಂತಿಲ್ಲ. ಅಪ್ಪು ಅಭಿಮಾನಿಗಳು ಒಂದಿಲ್ಲೊಂದು ರೀತಿಯಲ್ಲಿ ನೆಚ್ಚಿನ ನಟನನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಜೊತೆಗೆ ನೂರಾರು ಅಭಿಮಾನಿಗಳು ನಿತ್ಯವೂ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಬಂದು ನಮನ ಸಲ್ಲಿಸುತ್ತಲೇ ಇದ್ದಾರೆ. ಅಷ್ಟೊಂದು ಅಭಿಮಾನ ಮತ್ತು ಪ್ರೀತಿಯನ್ನು ಅಪ್ಪು ಅಭಿಮಾನಿಗಳು ಇಟ್ಟುಕೊಂಡಿದ್ದಾರೆ.

ಈಗಾಗಲೇ ಪುನೀತ್ ಅವರ ಪುತ್ಥಳಿಗಳು ರಾಜ್ಯದ ನಾನಾ ಕಡೆ ಸ್ಥಾಪಿಸಲಾಗಿದ್ದು, ನಾಳೆ ಹೊಸಪೇಟೆಯಲ್ಲಿ ಬೃಹತ್ ಪುತ್ಥಳಿಯ ಉದ್ಘಾಟನೆ ಆಗಲಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಅಪ್ಪು ಹುಡುಗರು ಡಾ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಬಳಗದಿಂದ ಈ ಪ್ರತಿಮೆ ಸ್ಥಾಪಿಸಲಾಗುತ್ತಿದ್ದು, ನಾಳೆ ಅದನ್ನು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

Related