ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಗುಣಮಟ್ಟದ ಲ್ಯಾಬ್

ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಗುಣಮಟ್ಟದ ಲ್ಯಾಬ್

ಹೊಸಕೋಟೆ : ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ದಿನಕ್ಕೆ “1 ಲಕ್ಷ ಕೋವಿಡ್ ಟೆಸ್ಟ್” ಗುರಿ ತಲುಪಲಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

‘ಎಂವಿಜೆ ಮೆಡಿಕಲ್ ಕಾಲೇಜು’ ಹಾಗೂ ರೀಸರ್ಚ್ ಹಾಸ್ಪಿಟಲ್ನಲ್ಲಿ ಶನಿವಾರ ಎಂವಿಜೆ “ಕೋವಿಡ್ ಲ್ಯಾಬ್” ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿ, ಒಂದು ವರ್ಷದಲ್ಲಿ ನಾನು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಯವನ್ನು ಸದುಪಯೋಗ ಮಾಡಿಕೊಂಡಿದ್ದೆ. ಮೊದಲ ಪ್ರಯತ್ನದಲ್ಲೇ ಪ್ರವೇಶಾತಿ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಧೃತಿಗೆಡದೆ ಪ್ರಯತ್ನ ಮುಂದುವರೆಸಬೇಕು ಎಂದು ಆತ್ಮವಿಶ್ವಾಸ ತುಂಬಿದರು.

ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರಕಾರ ಬದ್ಧತೆ ಪ್ರದರ್ಶಿಸಿದೆ. ಕೇವಲ ಒಂದು ಲ್ಯಾಬ್‍ನಿಂದ ಪ್ರಾರಂಭವಾದ ಕೊವಿಡ್ ಟೆಸ್ಟ್ , ಕೇವಲ ಆರು ತಿಂಗಳಲ್ಲಿ 108 ಲ್ಯಾಬ್ಗಳನ್ನು ತೆರೆದಿದ್ದೇವೆ. ಪ್ರಾರಂಭದಲ್ಲಿ ಸುಮಾರು 300 ಕೋವಿಡ್ ಟೆಸ್ಟ್ನಿಂದ 75 ಸಾವಿರಕ್ಕೆ ಏರಿಕೆಯಾಗಿದೆ.

ಹೊಸಕೋಟೆಯಲ್ಲಿ ತೆರೆದಿರುವ ಕೋವಿಡ್ ಟೆಸ್ಟ್ ಗ್ರಾಮೀಣ ಭಾಗದ ಜನರಿಗೆ ಅತಿ ಹೆಚ್ಚು ಉಪಯುಕ್ತವಾಗಿದೆ. 60 ವೈದ್ಯಕೀಯ ಕಾಲೇಜುಗಳಿವೆ. ವರ್ಷಕ್ಕೆ 10 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದಾರೆ. ಕಾಲೇಜಿನ ಸಂಖ್ಯೆ ಹೆಚ್ಚಿಸಿದರೆ ಸಾಲದು ಗುಣಮಟ್ಟದ ಶಿಕ್ಷಣ ಕೊಡಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ  ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ.

 

Related