ವಿಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ

ವಿಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಬಹುಮತದಿಂದ ಗೆದ್ದು ಅಧಿಕಾರದ ಗದ್ದುಗೆಯನ್ನು ಏರಿ ಈಗಾಗಲೇ ಆರು ತಿಂಗಳು ತುಂಬುತ್ತಾ ಬಂದಿದೆ.

ಆರು ತಿಂಗಳ ನಂತರ ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆಯಾಗಿದ್ದು ಬಿಜೆಪಿ ಪಕ್ಷಕ್ಕೆ ಬಲಬಂದಂತಾಗಿದೆ.

ಹೌದು ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರು ಆಯ್ಕೆಯಾಗಿದ್ದಾರೆ. ಮುದುಡಿದ ಕಮಲ ವಿಪಕ್ಷ ನಾಯಕನ ಆಯ್ಕೆಯಿಂದ ಅರಳಿದಂತಾಗಿದೆ.

ಯಸ್.. ಒಕ್ಕಲಿಗ ಸಮುದಾಯದ ನಾಯಕ, ಮಾಜಿ ಉಪ ಮುಖ್ಯಮಂತ್ರಿ, ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್​ ಅಶೋಕ ಅವರಿಗೆ ಪ್ರತಿಪಕ್ಷ ನಾಯಕನ ಜವಾಬ್ದಾರಿ ವಹಿಸಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ (ನ.17 ಶುಕ್ರವಾರ) ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿತ್ತು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

 

Related