ಸಿಸಿಬಿ ವಶಕ್ಕೆ ರಾಗಿಣಿ

ಸಿಸಿಬಿ ವಶಕ್ಕೆ ರಾಗಿಣಿ

ಬೆಂಗಳೂರು : ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಅವರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ಆದೇಶ ಹೊರಡಿಸಿದೆ.

ಇಂದು ಸಿಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ, ಸಿಸಿಬಿ ಪೊಲೀಸರು ನಟಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಸಿಸಿಬಿ ಪೊಲೀಸರು ನಟಿ ರಾಗಿಣಿ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅವರನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯವಿದ್ದು, ಇನ್ನಷ್ಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸುವಂತೆ ಕೋರ್ಟ್ ಗೆ ಮನವಿ ಮಾಡಿದ್ದಾರೆ. ನ್ಯಾಯಾಲಯದಲ್ಲಿ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

Related