ನಾಳೆ ಮಂಡ್ಯ, ಕೋಲಾರದಲ್ಲಿ ರಾಹುಲ್‌ ಅಬ್ಬರ

ನಾಳೆ ಮಂಡ್ಯ, ಕೋಲಾರದಲ್ಲಿ ರಾಹುಲ್‌ ಅಬ್ಬರ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸುಮಾರು 18ರಿಂದ 20 ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಭರವಸೆಯನ್ನು ಹೊಂದಿದ್ದು, ನಾಳೆ ಕರ್ನಾಟಕ ರಾಜ್ಯದಲ್ಲಿ ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿಯವರು ಅಬ್ಬರದ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.

ಇನ್ನು ಏಪ್ರಿಲ್ 17ರಂದು ಬುಧವಾರ ರಾಜ್ಯಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ 2 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಘೋಷಣೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದರು, ಅಮಿತ್ ಶಾ ಕೂಡಾ ರಾಜ್ಯಕ್ಕೆ ಆಗಮಿಸಿದ್ದರು. ಆದರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಆಗಮಿಸಿರಲಿಲ್ಲ. ಈ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬುಧವಾರ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಫಿಕ್ಸಾಗಿದೆ.

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಕೋಲಾರ ಜಿಲ್ಲೆಗೆ ತೆರಳಲಿದ್ದಾರೆ. ಕೋಲಾರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಾಕಷ್ಟು ಗೊಂದಲ ಸೃಷ್ಟಿಯಾಗಿತ್ತು. ಗೆಲ್ಲುವ ಸಾಧ್ಯತೆ ಇರುವ ಕೋಲಾರದಲ್ಲಿ ಭಿನ್ನಮತೀಯ ಚಟುವಟಿಕೆಯೇ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ರಾಹುಲ್ ಪ್ರವಾಸ ಮಹತ್ವ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.

Related