ಬಿಎಂಟಿಸಿ ಬಸ್​​ನಲ್ಲಿ ಸಂಚರಿಸಿದ ರಾಹುಲ್​ ಗಾಂಧಿ

ಬಿಎಂಟಿಸಿ ಬಸ್​​ನಲ್ಲಿ ಸಂಚರಿಸಿದ ರಾಹುಲ್​ ಗಾಂಧಿ

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಎರಡು ದಿನ ಬಾಕಿ ಇದ್ದು ಎಲ್ಲಾ ಪಕ್ಷದ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಪರವಾಗಿ ರಾಹುಲ್ ಗಾಂಧಿಯವರು ಪ್ರಚಾರದಲ್ಲಿ ತೊಡಗಿದ್ದು, ಇಂದು ಬೆಂಗಳೂರುನಲ್ಲಿ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣ ಮಾಡಿ ಸರ್ವಜನಿಕರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮತಯಾಚನೆ ಮಾಡಿದ್ದಾರೆ.

ಹೌದು, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಬೆಳಿಗ್ಗೆ ಬೆಂಗಳೂರಿನ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್​​ನ​ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಚಾರ ಸಂಬಂಧ ನಿನ್ನೆ ರಿಂದ ರಾಜ್ಯ ಪ್ರವಾಸದಲ್ಲಿದ್ದಾರೆ. ನಗರದಲ್ಲಿ ರವಿವಾರ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಂದು ಬೆಳಿಗ್ಗೆ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದಿದ್ದಾರೆ. ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Related