ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ ಎಂದ ರಾಹುಲ್

ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ ಎಂದ ರಾಹುಲ್

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು ಈ ಸಮಾರಂಭದಲ್ಲಿ ರಾಹುಲ್ ಗಾಂಧಿಯವರು ಮಾತನಾಡಿ, ಕರ್ನಾಟಕದ ಜನರಿಗೆ ಮನಃಪೂರ್ವಕವಾಗಿ ಅಭಿನಂದನೆಗಳು. ಕಾಂಗ್ರೆಸ್​​ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಕ್ಕೆ ಅಭಿನಂದನೆಗಳು. ಭಾರತ್ ಜೋಡೋ ಯಾತ್ರೆಯಿಂದ ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ ಎಂದು ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಹೇಳಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿತ್ತು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ ಗ್ಯಾರಂಟಿಗಳನ್ನು ನಾವು ನೀಡಿದ್ದೆವು, ಎಲ್ಲವನ್ನೂ ಈಡೇರಿಸುತ್ತೇವೆ ಎಂದರು.

 

Related