ಬಳ್ಳಾರಿಯಲ್ಲಿಂದು ರಾಹುಲ್‌ ಭರ್ಜರಿ ರ‍್ಯಾಲಿ

ಬಳ್ಳಾರಿಯಲ್ಲಿಂದು ರಾಹುಲ್‌ ಭರ್ಜರಿ ರ‍್ಯಾಲಿ

ಬಳ್ಳಾರಿ: ಬಳ್ಳಾರಿಯಲ್ಲಿ ಶನಿವಾರ ನಡೆದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾರತ್ ಜೋಡೋ ಯಾತ್ರೆ ನೇತಾರ ರಾಹುಲ್ ಗಾಂಧಿ ಭಾರತ ಐಕ್ಯತಾ ಯಾತ್ರೆ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಸಮಾವೇಶಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಇಲ್ಲಿನ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ವೇದಿಕೆ ನಿರ್ಮಾಣಗೊಂಡಿದೆ. ಐಕ್ಯತಾ ಯಾತ್ರೆಯ ಸಮಾವೇಶದಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಸೇರಿದಂತೆ 60ಜನರಿಗೆ ಮಾತ್ರ ಕುಳಿತುಕೊಳ್ಳಲು ಹಾಗೂ ವೇದಿಕೆಯ ಮುಂಭಾಗದಲ್ಲಿ 60 ಸಾವಿರ ಜನರು ಕುಳಿತುಕೊಳ್ಳುವಷ್ಟುಆಸನಗಳ ವ್ಯವಸ್ಥೆ ಮಾಡಲಾಗಿದೆ.

ಪಾದಯಾತ್ರೆ ಹಾಗೂ ಸಾರ್ವಜನಿಕ ಸಮಾವೇಶ ಸೇರಿ ಐದು ಲಕ್ಷ ಜನ ಭಾಗವಹಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದು, ಸುಮಾರು ಮೂರು ಲಕ್ಷ ಜನರು ಪಾಲ್ಗೊಳ್ಳಬಹುದು ಎಂದು ಅಂದಾಜಿಸಲಾಗಿದೆ. ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಿಂದ ಪಕ್ಷದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಬಳ್ಳಾರಿ ಸಮಾವೇಶಕ್ಕೆ ಆಗಮಿಸಲಿದ್ದಾರೆ.

 

 

Related