ರೈಲು ಸಂಚಾರಕ್ಕೆ ಅನುಮತಿ

ರೈಲು ಸಂಚಾರಕ್ಕೆ ಅನುಮತಿ

ಬೆಂಗಳೂರು : ಕೊರೊನಾ ಭೀತಿಯಿಂದ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡಿದ ಹಿನ್ನಲೆ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿಶೇಷ ರೈಲುಗಳ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದು, ನಾಳೆಯಿಂದ ರಾಜ್ಯದಲ್ಲಿ ವಿಶೇಷ ರೈಲು ವ್ಯವಸ್ಥೆ ಇರಲಿದೆ.

ಇದೀಗ ಲಾಕ್ ಡೌನ್ ಸಡಿಲಿಕೆ ಹಿನ್ನಲೆ ರಾಜ್ಯದಲ್ಲಿ ರೈಲು ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದು, ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ರೈಲು, ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ರೈಲು, ಬೆಳಗಾವಿಯಿಂದ ಬೆಂಗಳೂರಿಗೆ ವಿಶೇಷ ರೈಲು ವ್ಯವಸ್ಥೆ ಇರಲಿದೆ. ಆದಕಾರಣ ಇಂದಿನಿಂದ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ.

Related