ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ..!

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ..!

ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಈ ಬಾರಿ ರಾಜ್ಯದಲ್ಲಿ ಮಳೆ ಸಾಕಷ್ಟು ಸುರಿದಿದ್ದು ಪ್ರಮುಖ ಜಲಾಶಯಗಳಲ್ಲಿ ನೀರು ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ. ಅಲ್ಲದೆ, ಕೆಲ ಜಲಾಶಯಗಳಿಂದ ಹೆಚ್ಚುವರಿಯಾದ ನೀರನ್ನು ಈಗ ಹೊರಬಿಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಮಳೆಯ ಆರ್ಭಟ ಸಾಕಷ್ಟಿದ್ದ ಕಾರಣ ಕೆಲ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿತ್ತು. ಆದರೆ, ಈಗ ಎಲ್ಲೆಡೆ ಮಳೆ ಕಡಿಮೆಯಾಗಿದ್ದು ಅದರಂತೆ ಒಳಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ಆದಾಗ್ಯೂ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ.

ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿಯೇ ಕಂಡುಬಂದಿದೆ. ಕಳೆದ ಹತ್ತು ದಿನಗಳಲ್ಲಿ ಉತ್ತರ ಭಾಗವೂ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸುರಿದಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದ್ದರೆ ಕೆಲವೆಡೆ ಪ್ರವಾಹ ಉಂಟಾಗಿ ಕೃಷಿ ಭೂಮಿ ಜಲಾವೃತವಾಗಿ ಬೆಳೆ ನಾಶವಾಗಿದ್ದು ಹಲವು ರೈತರು ಕಂಗಾಲಾಗಿದ್ದು ಸಹ ಸುಳ್ಳಲ್ಲ. ಕೆಲ ದಿನಗಳಿಂದ ಮಳೆ ಕಡಿಮೆಯಾಗುತ್ತಿದ್ದು ಕೆಲವು ಸ್ಥಳಗಳಲ್ಲಿ ಪ್ರವಾಹದಿಂದಾಗಿ ಮುಳುಗಿ ಹೋಗಿದ್ದ ಚಿಕ್ಕ ಪುಟ್ಟ ಸೇತುವೆಗಳು ಮತ್ತೆ ಕಾಣತೊಡಗಿವೆ. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.

Related