ರಾಜ್ಯದಲ್ಲಿ 3 ದಿನ ಭಾರೀ ಮಳೆ

ರಾಜ್ಯದಲ್ಲಿ 3 ದಿನ ಭಾರೀ ಮಳೆ

ಬೆಂಗಳೂರು, ಜೂ.11 :  ವಾಯುಭಾರ ಕುಸಿತ, ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆಗಳಿವೆ.

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಹವಾ ಮುನ್ಸೂಚನೆ ಪ್ರಕಾರ ರಾಜ್ಯದ ದಕ್ಷಿಣ, ಉತ್ತರ ಒಳನಾಡಿನಲ್ಲಿ ಚದುರಿದಂತೆ ಸಾಧರಣ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.
ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಹಗುರ ಇಲ್ಲವೆ  ಸಾಧಾರಣ ಮಳೆಯಾಗಲಿದೆ.

Related