ರಾಜ್ಯದಲ್ಲಿ ಇಂದಿನಿಂದ ಹಲವೆಡೆ ಮಳೆ ಸಾಧ್ಯತೆ

ರಾಜ್ಯದಲ್ಲಿ ಇಂದಿನಿಂದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಹಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ.

ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಮಳೆಯಾಗದೆ ಜನರು ಕಂಗಟ್ಟಿದ್ದಾರೆ ಆದ್ದರಿಂದ ಈ ತಿಂಗಳಾದರೂ ಮಳೆಯಾದರೆ ಜನರ ಮುಖದಲ್ಲಿ ಮತ್ತು ರೈತರ ಮುಖದಲ್ಲಿ ಸಂತಸ ವ್ಯಕ್ತವಾಗುತ್ತದೆ.

ಹೌದು, ರಾಜ್ಯದಲ್ಲಿ ಮತ್ತೆ ಮಳೆ ಬರುವ ವಾತಾವರಣ ನಿರ್ಮಾಣವಾಗಿದ್ದು, ಇಂದಿನಿಂದ 5 ದಿನಗಳ ಕಾಳ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

 

Related