ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥ

ಬೆಂಗಳೂರು : ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು. ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗಿದ್ದು, ಮಧ್ಯಾಹ್ನದಿಂದಲೇ ಹಲವೆಡೆ ಭಾರೀ ಗುಡುಗು, ಮಿಂಚು ಸಿಡಿಲು ಮಳೆಯಾರ್ಭಟಕ್ಕೆ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.

ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ವಿದ್ಯಾರಣ್ಯಪುರ ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ಹೆಬ್ಬಾಳ, ಎಚ್ಎಸ್ಆರ್ ಬಡಾವಣೆ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ 

ರಾಮನಗರ ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ..

ರಾಮನಗರ ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ , ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಇನ್ನು ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾದ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮೇ ರಂದು ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆ ವ್ಯವಸ್ಥೆಯು ರೂಪುಗೊಳ್ಳುತ್ತದೆ, ನಂತರ ಮೇ ರಂದು ಕಡಿಮೆ ಒತ್ತಡ ಉಂಟಾಗುತ್ತದೆ ಮತ್ತು ಇದರ ಪರಿಣಾಮವಾಗಿ ಗರಿಷ್ಠ ತಾಪಮಾನವು ಕುಸಿಯುತ್ತದೆ. ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ನAತಹ ರಾಜ್ಯಗಳಲ್ಲಿ, ತಾಪಮಾನ ಈಗಾಗಲೇ ಕುಸಿದಿದೆ. ಪೂರ್ವ ಭಾರತದಲ್ಲಿ, ಒಡಿಶಾ, ಬಿಹಾರ, ಬಂಗಾಳ ಮತ್ತು ಜಾರ್ಖಂಡ್ನಲ್ಲಿ ನಿನ್ನೆಯಿಂದ ತಾಪಮಾನವು ಈಗಾಗಲೇ ಸ್ವಲ್ಪಮಟ್ಟಿಗೆ ಇಳಿಯಲು ಪ್ರಾರಂಭಿಸಿದೆ

 

Related