ರಾಜ್ಯದಲ್ಲಿ ಹಲವೆಡೆ ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ಥ

ರಾಜ್ಯದಲ್ಲಿ ಹಲವೆಡೆ ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ಥ

ರಾಜ್ಯದ ಹಲವೆಡೆ ಭಾರೀ ಮಳೆಯಾಗ್ತಿದೆ. ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗಿದ್ದು, ಮಧ್ಯಾಹ್ನದಿಂದಲೇ ಹಲವೆಡೆ ಭಾರೀ ಮಳೆಯಾಗುತ್ತಿದೆ. ಸಾರ್ವಜನಿಕರು, ವಾಹನ ಸವಾರರು, ಬಸ್ ಚಾಲಕರು  ಪರದಾಡುವಂತಾಯಿತು.

ವಿಧಾನಸೌಧ, ಕೆ. ಆರ್.ವೃತ್ತ, ಶಿವಾಜಿನಗರ, ವಸಂತನಗರ ಲಾಲ್ ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ವಿದ್ಯಾರಣ್ಯಪುರ, ಜೆ.ಪಿ. ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ ಹೆಬ್ಬಾಳ, ಎಚ್.ಎ.ಎಲ್ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗ್ತಿದೆ.

ರಾಮನಗರ ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ,ಕೋಲಾರ, ಮಂಡ್ಯ, ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ.

ಇನ್ನು ಕೆಲವು ರಾಜ್ಯಗಳಲ್ಲಿ ಭಾರೀ ಮಳೇಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related