ಪಂಚಮಶಾಲಿ ಹೋರಾಟಕ್ಕೆ ರಾಜಕೀಯ ಶಕ್ತಿಬೇಕು

  • In State
  • May 7, 2022
  • 269 Views
ಪಂಚಮಶಾಲಿ ಹೋರಾಟಕ್ಕೆ ರಾಜಕೀಯ ಶಕ್ತಿಬೇಕು

ಪಂಚಮಶಾಲಿ ಸಮುದಾಯಕ್ಕೆ ೨ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಹಾಗೂ ಬೈಕ್ ರ‍್ಯಾಲಿ ನಡೆಸಲಾಯಿತು.

ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಪಂಚಮಶಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ  ಬೋಮ್ಮಾಯಿಯವರು ಬಜೆಟ್ ಅಧಿವೇಶನ ಸಂದರ್ಭದಲ್ಲಿ ಮಿಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು, ಆದರೆ ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ, ಪಂಚಮಸಾಲಿಗಳೆಲ್ಲ ಸೇರಿ ಕ್ರಾಂತಿ ಮಾಡುವ ಮೊದಲೇ ಮೀಸಲಾತಿ ನೀಡಿ ಇಲ್ಲದಿದ್ದರೇ ಉಗ್ರ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪಂಚಮಸಾಲಿ ಮೀಸಲಾತಿಗಾಗಿ ಕಳೆದ ೧೫ ತಿಂಗಳಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಪ್ರತಿಯೊಂದು ತಾಲೂಕು, ಪ್ರತಿಯೊಂದು ಜಿಲ್ಲಾಮಟ್ಟದಲ್ಲಿ ಸತ್ಯಾಗ್ರಹ ಕೈಗೊಳ್ಳಲು ನಿರ್ಧಾರ ಮಾಡಿದ್ದೇವೆ, ಆಗಲೂ ಸರ್ಕಾರ ನಮ್ಮ ಬೇಡಿಕೆಯನ್ನ ಈಡೇರಿಸದೆ ಹೊದಲ್ಲಿ ಮುಖ್ಯಮಂತ್ರಿಗಳ ಮನೆಯ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

 

Related