ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸು: ಡಿಸಿಎಂ

ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸು: ಡಿಸಿಎಂ

ಬೆಂಗಳೂರು: ರಾಮ ಮಂದಿರ ಉದ್ಘಾಟನೆಯಿಂದ ಇಂದು 500 ವರ್ಷಗಳ ಕನಸು ನನಸಾಗಿದೆ ಆದ್ದರಿಂದ ಕರ್ನಾಟಕ ರಾಜ್ಯ ಮಾತ್ರವಲ್ಲದೆ ಇಡೀ ದೇಶದಲ್ಲಿ ಹಿಂದೂ ಜನಾಂಗ ಬಹಳ ಸಡಗರ ಸಂಭ್ರಮದಿಂದ ರಾಮನಲ್ಲಾ ಪ್ರತಿಷ್ಠಾಪನೆಯನ್ನು ಮಾಡುತ್ತಿದ್ದಾರೆ.

ಇನ್ನು ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಯೋಧ್ಯ ರಾಮ ಮಂದಿರ ಉದ್ಘಾಟನೆಗೆ ಶುಭ ಕೋರಿದ್ದಾರೆ. ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ 5 ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಕೆ ಶಿವಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತೆರಳದೇ ಇರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಯಾರೂ ಆಹ್ವಾನ ಇದ್ದರೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದೂ ಕಾಂಗ್ರೆಸ್​ನ ಕೆಲವು ನಾಯಕರು ಟೀಕಿಸಿದ್ದಾರೆ.

 

Related