ಸತತ ನಾಲ್ಕನೇ ಬಾರಿಯೂ ಸಚಿವರಾಗಿರುವ ರಾಮಲಿಂಗಾ ರೆಡ್ಡಿ

ಸತತ ನಾಲ್ಕನೇ ಬಾರಿಯೂ ಸಚಿವರಾಗಿರುವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಜಯ ಸಾಧಿಸಿದೆ. ಇಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್‌ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಎಂಟು ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅದರಲ್ಲಿ ಬಿಟಿಎಂ ಲೇಔಟ್‌ ಕ್ಷೇತ್ರದ ಶಾಸಕರಾಗಿರುವ ರಾಮಲಿಂಗಾ ರೆಡ್ಡಿ ಸಹ ಒಬ್ಬರು.

ಬೆಂಗಳೂರಿನ ಹಿರಿಯ ನಾಯಕರಲ್ಲಿ ಒಬ್ಬರಾದ ರಾಮಲಿಂಗಾ ರೆಡ್ಡಿ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಮಲಿಂಗಾ ರೆಡ್ಡಿ ಜಯನಗರದಿಂದ ನಾಲ್ಕು ಬಾರಿ ಮತ್ತು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಎಂಟು ಬಾರಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಾರ್ಪೊರೇಟರ್ ಆಗಿ ರಾಜಕೀಯ ಜೀವನ ಆರಂಭಿಸಿ 8 ಬಾರಿ ಶಾಸಕರಾಗಿ, ಸಚಿವರಾಗಿಯೂ ಕಾರ್ಯನಿರ್ವಹಿಸಿರುವ ರಾಮಲಿಂಗಾರೆಡ್ಡಿಅವರು ಈಗ ಮತ್ತೊಮ್ಮೆ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾಜಿ ಗೃಹ ವ್ಯವಹಾರಗಳ ಸಚಿವರು, ಸಾರಿಗೆ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು ಮತ್ತು ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರೂ ಆಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದುಬಂದಿದೆ.

 

Related