ಬಿಜೆಪಿ: 7ನೇ ಬಾರಿ ಗೆದ್ದು ಬೀಗಿದ ರಮೇಶ್ ಜಾರಕಿಹೊಳಿ

ಬಿಜೆಪಿ: 7ನೇ ಬಾರಿ ಗೆದ್ದು ಬೀಗಿದ ರಮೇಶ್ ಜಾರಕಿಹೊಳಿ

ಬೆಳಗಾವಿ: 2023 ನೇ ವಿಧಾನಸಭಾ ಚುನಾವಣೆಯಲ್ಲಿ ಬಹಳ ಪೈಪೋಟಿಯನ್ನು ಹೊಂದಿದ್ದ ಕ್ಷೇತ್ರವಾಗಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿ ಹೋಳಿ ಅವರು ಗೆದ್ದು ನಗೆಯ ಪತಕೆಯನ್ನು ಬಾರಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಹಾಲಿ ಶಾಸಕ ಬಿಜೆಪಿಯ ರಮೇಶ್ ಜಾರಕಿಹೊಳಿ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಏಳನೇ ಬಾರಿ ಗೆದ್ದು ಬೀಗಿದ್ದಾರೆ. 2019 ರಲ್ಲಿ ಜೆಡಿ ಎಸ್ ಕಾಂಗ್ರೆಸ್ ಸರ್ಕಾರದ ಪತನದಲ್ಲಿ ಅವರು ಮಹತ್ವದ ಪಾತ್ರವನ್ನು ಹೊಂದಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮಹಾಂತೇಶ್ ಕಡಾಡಿ ಮತ್ತು ಜೆಡಿಎಸ್ ಚಂದನ್ ಕುಮಾರ್ ಕಣದಲ್ಲಿದ್ದರು.

ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರ ಹಾಗೂ ಜನರು ಕಾತುರದಿಂದ ಫಲಿತಾಂಶದ ನಿರೀಕ್ಷೆಯನ್ನಿಟ್ಟುಕೊಂಡಿರುವ ಕ್ಷೇತ್ರಗಳಲ್ಲಿ ಬೆಳಗಾವಿಯ ಗೋಕಾಕ್ ಕ್ಷೇತ್ರ ಕೂಡ ಒಂದಾಗಿತ್ತು. ಈ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಪ್ರಭಾವವೇ ಹೆಚ್ಚಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ರಮೇಶ್‌ ಜಾರಕಿಹೊಳಿ ಈ ಬಾರಿಯೂ ಗೆಲುವು ಸಾಧಿಸುವ ನಿಟ್ಟಿನಲ್ಲಿ ವ್ಯಾಪಕ ಪ್ರಯತ್ನ ನಡೆಸಿದ್ದರು.

ಜಾರಕಿಹೊಳಿ ಅವರು ಕರ್ನಾಟಕ ವಿಧಾನಸಭೆಯ ಆರು ಬಾರಿ ಸದಸ್ಯರಾಗಿದ್ದಾರೆ. ಜೂನ್ 2016 ರಲ್ಲಿ, ಅವರು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ಕ್ಯಾಬಿನೆಟ್ ಸಚಿವರಾಗಿ ಸೇರ್ಪಡೆಗೊಂಡರು.

 

Related