ರನ್ಯಾರಾವ್ ಚಿನ್ನ ಕಳ್ಳಸಾಗಣೆಕೆ ಪ್ರಕರಣ ಸೂಕ್ತ ತನಿಖೆಯಾಗಲಿ: ಲಕ್ಷ್ಮೀ ಹೆಬ್ಬಾಳಕರ್

 ರನ್ಯಾರಾವ್ ಚಿನ್ನ ಕಳ್ಳಸಾಗಣೆಕೆ ಪ್ರಕರಣ ಸೂಕ್ತ ತನಿಖೆಯಾಗಲಿ: ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ರನ್ಯಾರಾವ್ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಕೇವಲ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಲ್ಲಿ ಬಾರಿ ಸದ್ದು ಮಾಡುತ್ತಿದೆ. ಸುಮಾರು 14 ಕೆಜಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡುತ್ತಿರುವ ಪ್ರಕರಣದಲ್ಲಿ ರನ್ಯಾರಾವ್ ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ರವರು ಪ್ರತಿಕ್ರಿಯಿಸಿದ್ದಾರೆ.  ಇದನ್ನೂ ಓದಿ: ಚಿನ್ನ ಕಳ್ಳ ಸಾಗಾಣಿಕೆ ಬಗ್ಗೆ ನಟಿ ರನ್ಯಾ ಹೇಳಿದ್ದೇನು?

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆಕೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಹೇಳಿದರು.

ರನ್ಯಾರಾವ್ ಚಿನ್ನ ಕಳ್ಳಸಾಗಣೆಕೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತುಮಾತನಾಡಿದ ಅವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ ಎಂದರು.

 

 

Related