ರಾಸಲೀಲೆ : ರಮೇಶ್ ಜಾರಕಿಹೊಳಿಗೆ ಸಿಎಂ ಬುಲಾವ್

ರಾಸಲೀಲೆ : ರಮೇಶ್ ಜಾರಕಿಹೊಳಿಗೆ ಸಿಎಂ ಬುಲಾವ್

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೈಕಮಾಂಡ್ ನಲ್ಲಿ ಚರ್ಚೆ ನಡೆದಿದ್ದು, ಇಂದೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಪ್ರಕರಣ ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಆಗ್ರಹಿಸುತ್ತಿದೆ. ಈ ನಡುವೆ ರಮೇಶ್ ಜಾರಕಿಹೊಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಬುಲಾವ್ ನೀಡಿದ್ದಾರೆ.

ರಾಜ್ಯದ ಒಂದು ಲೋಕಸಭೆ ಹಾಗೂ 3 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇದು ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಉಂಟು ಮಾಡಿದ್ದು, ಬಿಜೆಪಿ ಹೈಕಮಾಂಡ್ ಕೂಡ ಕೆಂಡವಾಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲು ಸಿಎಂ ನಿರ್ಧರಿಸಿದ್ದಾರೆ.

Related