ಮಿಷನ್ ಮಜ್ನು ಸಿನಿಮಾದಲ್ಲಿ ರಶ್ಮಿಕಾ ನಾಯಕಿ

ಮಿಷನ್ ಮಜ್ನು ಸಿನಿಮಾದಲ್ಲಿ ರಶ್ಮಿಕಾ ನಾಯಕಿ

ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಸಿದ್ಧಾರ್ಥ್ ಮಲ್ಹೋತ್ರಾ ನಾಯಕರಾಗಿರುವ ಮಿಷನ್ ಮಜ್ನು ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿದ್ದಾರೆ.

ಈ ಮೂಲಕ ಮೊದಲ ಬಾರಿಗೆ ಬಾಲಿವುಡ್‌ಗೆ ಎಂಟ್ರಿಕೊಟ್ಟಂತಾಗಿದೆ. ಈಗ ರಶ್ಮಿಕಾ ಮೊದಲ ದಿನದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ರಶ್ಮಿಕಾ ಕ್ಲಾಪ್ ಬೋರ್ಡ್ ಹಿಡಿದುಕೊಂಡಿರುವ ವಿಡಿಯೋ ಶೇರ್ ಮಾಡಿದ್ದಾರೆ. ಈ ಮೂಲಕ ಬಾಲಿವುಡ್‌ನ ಮೊದಲ ಸಿನಿಮಾದ ಖುಷಿಯನ್ನು ಹಂಚಿಕೊಂಡಿದ್ದಾರೆ.

ಇತ್ತ ಕಡೆ ರಶ್ಮಿಕಾ ತೆಲುಗು ಚಿತ್ರರಂಗದಲ್ಲೂ ಬಿಝಿ. ಸದ್ಯ ಅಲ್ಲು ಅರ್ಜುನ್ ನಟನೆಯ ಪುಷ್ಪದಲ್ಲಿ ನಟಿಸುತ್ತಿದ್ದಾರೆ. ಯಾವುದೇ ಕಲೆಯಾಗಿರಲಿ, ಕಲಾವಿದನಾಗಿರಲಿ ಅದಕ್ಕೆ ಭಾಷೆಯ ಚೌಕಟ್ಟು ಇರಬಾರದು ಎನ್ನೋದು ರಶ್ಮಿಕಾ ನಿಲುವು.

Related