ಧಾರವಾಡ : ಬೆಳಗಾವಿಯ ಪೀರನವಾಡಿ ಗ್ರಾಮದಲ್ಲಿ ನಿರ್ಮಾಣಗೊಳಿಸಿದ್ದಂತ ಸಂಗೊಳ್ಳಿ ರಾಯಣ್ಣನ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ, ಧಾರವಾಡದಲ್ಲಿ ಕುರುಬರ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಕುರುಬ ನೌಕರರ ಕ್ಷೇಮಾಭಿವೃದ್ಧಿ ಸಂಘವು, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸಿದ್ದನ್ನು ವಿರೋಧಿಸಿ, ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಪ್ರತಿಭಟನಾನಿರತರು, ಕಿತ್ತೂರು ಸಂಸ್ಥಾನದ ಸ್ವಾತಂತ್ರ‍್ಯ ಹೋರಾಟಗಾರ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಆಗಿದ್ದಾನೆ. ಈ ಸಂಬಂಧ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ರು. ಅಲ್ಲದೇ ಪೀನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮರು ಸ್ಥಾಪಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.