ಚೆನ್ನೈ: 17ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೀನಾಯವಾಗಿ ಸೋಲನ್ನ ಅನುಭವಿಸಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಮುಖವಾಗಿದ್ದು ಮೊದಲ ಪಂದ್ಯದಲ್ಲೇನೆ ಆರ್‌ಸಿಬಿ ಸೋಲನ್ನ ಅನುಭವಿಸಿದೆ.
ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.
174 ರನ್ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್ ಬಾರಿಸಿ ನಿರಾಯಾಸವಾಗಿ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತವರಿನಲ್ಲಿ ಆರ್‌ಸಿಬಿ ವಿರುದ್ಧದ ಗೆಲುವಿನ ನಾಗಾಲೋಟ ಮುಂದುವರೆಸಿದೆ.