ಮೇ 20ಕ್ಕೆ ಸಿದ್ದು, ಡಿಕೆಶಿ ಪ್ರಮಾಣವಚನ ಸ್ವೀಕಾರ

ಮೇ 20ಕ್ಕೆ ಸಿದ್ದು, ಡಿಕೆಶಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ರಾಷ್ಟ್ರದ ರಾಜಧಾನಿಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಕರ್ನಾಟಕ ರಾಜ್ಯದ ಸಿಎಂ ಪಟ್ಟಕ್ಕಾಗಿ ಹೈಡ್ರಾಮಾ ನಡೆದಿತ್ತು.

ರಾಜ್ಯದ ಮುಂದಿನ ಮುಖ್ಯಮಂತ್ರಿ ಪಟ್ಟಕ್ಕೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಬೀಗಿ ಪೆಟ್ಟು ಹಿಡಿದಿದ್ದರು.

ಆದರೆ ಇಂದು ಗುರುವಾರ ಮೇ 18ರಂದು ಅಧಿಕೃತವಾಗಿ ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದಾರೆ.

ಹೌದು, ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಸಿದ್ದರಾಮಯ್ಯ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಹಾಗೂ ಡಿಕೆ ಶಿವಕುಮಾರ್‌ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಗುರುವಾರ ನವದೆಹಲಿಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಹಾಗೂ ರಣದೀಪ್‌ ಸಿಂಗ್‌ ಸುರ್ಜೆವಾಲ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಡಿಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಮೇ 20ರಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

 

Related