ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್..!

ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್..!

ಇಂದಿನಿಂದ ಜುಲೈ.15ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಹಲವೆಡೆ 64.5ಮಿಲಿ ಮೀಟರ್ ನಿಂದ 115.5ಮಿಮಿ ನಷ್ಟು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಭಾರತೀಯ ಹವಾಮಾನ ಇಲಾಖೆ, ಜುಲೈ.11ರ ಇಂದು ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ 64.5ಮಿಮಿ ರಿಂದ 115.5ರಷ್ಟು ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.


ಜುಲೈ.12ರಂದು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ 115.6ಮಿಮಿ ನಿಂದ 204.4ಮಿಮಿ ನಷ್ಟು ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಜುಲೈ. 13ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ 64.5ರಿಂದ 115.5ಮಿಮಿನಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ದಿನಾಂಕ ಜುಲೈ 14ರಂದು ಮೈಸೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಸುಮಾರು 64.5ರಿಂದ 115.5ಮಿಮಿ ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.


ಜುಲೈ.15ರಂದು ಕೂಡ ಭಾರೀ ಮಳೆ ಮುಂದುವರೆಯಲಿದ್ದು, ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸುಮಾರು 64.5ರಿಂದ 115.5ಮಿಮಿ ನಷ್ಟು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related