ಕಾಫಿನಾಡುನಲ್ಲಿ ರೆಡ್ ಅಲರ್ಟ್..!

  • In Crime
  • August 5, 2022
  • 23 Views
ಕಾಫಿನಾಡುನಲ್ಲಿ ರೆಡ್ ಅಲರ್ಟ್..!

ಕಾಫಿನಾಡಲ್ಲಿ ಕಳೆದ ಹದಿನೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವನ ಅಬ್ಬರ ಮತ್ತೆ ಮುಂದುವರೆಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. ಐದು ಮತ್ತು ಏಳರಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ದಿನಾಂಕ ಆರನೇ ತಾರೀಖು ಶನಿವಾರದಿಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಆ 05: ಕಾಫಿನಾಡು ಚಿಕ್ಕಮಗಳೂರಲ್ಲಿ ಕಳೆದ ಹದಿನೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವನ ಅಬ್ಬರ ಮತ್ತೆ ಮುಂದುವರೆಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಅನ್ವಯ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಜನ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ.

ಚಿಕ್ಕಮಗಳೂರು ಅಪರ ಜಿಲ್ಲಾಧಿಕಾರಿ ರೂಪಾ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಪ್ರಕೃತಿ ವಿಕೋಪವನ್ನ ಎದುರಿಸಿಲು ಸೂಕ್ತಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಆಗಸ್ಟ್ ಐದರಿಂದ ಏಳರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Related