ಕರ್ನಾಟಕದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!

ಕರ್ನಾಟಕದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!

ಮಳೆಯಿಂದ ಕಂಗೆಟ್ಟ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಮಳೆ ಸುರಿಯುವ ಪ್ರಮಾಣ ಹೇಗಿರಲಿದೆ? ಇಲ್ಲಿದೆ ಮಾಹಿತಿ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇನ್ನೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ 3 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ.

ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ರೆಡ್ ಅಲರ್ಟ್ ಎಂದರೆ 204 ಮಿ.ಮೀಟರ್​ಗಿಂತ ಅಧಿಕ ಮಳೆಯಾಗುವ ಮುನ್ಸೂಚನೆಯಾಗಿದೆ.

Related