ಮೃತ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಬಿಡುಗಡೆ

ಮೃತ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಬಿಡುಗಡೆ

ಚಾಮರಾಜನಗರ : ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಸೋಂಕಿತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ.

ಮೇ 2ರಂದು ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 24 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದರು. ಮೃತರ ಕುಟುಂಬಕ್ಕೆ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಅದರಂತೆ ಇದೀಗ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ.

ಪರಿಹಾರಕ್ಕಾಗಿ ರಾಜ್ಯ ಸರ್ಕಾರ 48 ಲಕ್ಷ ರೂ. ಹಣವನ್ನು ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.

Related