ಪ.ಪಂಗಡಳ ಇಲಾಖೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಮನವಿ

ಪ.ಪಂಗಡಳ ಇಲಾಖೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಮನವಿ

ಬೆಂಗಳೂರು,ಅ.27: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ಇಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಶ್ರೀ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಯವರ ನೇತೃತ್ವದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಮತ್ತು ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಮನವಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವ ಬಗ್ಗೆ ಮನವಿ ಸಲ್ಲಿಸಿದರು

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಅತೀ ಶೀಘ್ರದಲ್ಲಿ ಶುಭಸುದ್ದಿ ನೀಡುವ ಭರವಸೆ ನೀಡಿದರು.

Related