ಬೇಡಿಕೆ ಈಡೇರಿಸುವಂತೆ ಮನವಿ

ಬೇಡಿಕೆ ಈಡೇರಿಸುವಂತೆ ಮನವಿ

ಲಿಂಗಸುಗೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ತಾಲೂಕು ಆರೋಗ್ಯಾಧಿಕಾರಿ ಡಾ. ರುದ್ರಗೌಡ ಪಾಟೀಲ್‌ರಿಗೆ ಮನವಿ ಸಲ್ಲಿಸಿದರು.

ಕೊರೋನಾ ಮಧ್ಯೆ ಹೋರಾಟದ ಯಶಸ್ಸಿಗೆ ಆಶಾ ಕಾರ್ಯಕರ್ತೆಯರು ಆಧಾರ ಸ್ತಂಭಗಳು ಎಂದು ಶ್ಲಾಘಿಸಿ, ಕೇವಲ ಚಪ್ಪಾಳೆ, ಹೂಮಳೆ ಸುರಿಸಿದರೆ ಸಾಲದು. ಖಂಡಿತವಾಗಿಯೂ ಸಂತಸವಿದೆ. ಆದರೆ ಕೊರೋನಾ ನಿಯಂತ್ರಣ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರು ವೇತನವಿಲ್ಲದೆ, ರಕ್ಷಣೆಯಿಲ್ಲದೆ, ಸಾಫ್ಟವೇರ್ ಅವ್ಯವಸ್ಥೆಯಿಂದಾಗಿ ಬಳಲಿ ಬೆಂಡಾಗಿದ್ದಾರೆ.

ದುಡಿತಕ್ಕೆ ತಕ್ಕ ಪ್ರತಿಫಲವಿಲ್ಲದೇ ಆಶಾಗಳು ಅನಿಶ್ಚಿತ ವೇತನದಿಂದ ಹೈರಾಣಾಗಿದ್ದು ಸರ್ಕಾರ ಕೂಡಲೇ ಗೌರವಧನ ಹಾಗೂ ಪ್ರೋತ್ಸಾಹಧನ ಎರಡನ್ನೂ ಸೇರಿಸಿ ಹಾಗೂ ಆಶಾ ಕಾರ್ಯಕರ್ತೆಯರ ಸೇವೆಗೆ ನೈಜ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಕನಿಷ್ಟ 12,000 ರೂ ವೇತನೆ ನಿಗದಿಪಡಿಸಬೇಕು ಎಂಬುದು ರಾಜ್ಯದ ಸಮಸ್ತ ಆಶಾ ಕಾರ್ಯಕರ್ತೆಯರ ಒಕ್ಕೋರಲಿನ ಬೇಡಿಕೆಯಾಗಿದೆ.

Related