ಕಾಂಗ್ರೆಸ್ ತೊರೆದ ಬ್ರಿಜೇಶ್ ಕಾಳಪ್ಪ..

ಕಾಂಗ್ರೆಸ್ ತೊರೆದ ಬ್ರಿಜೇಶ್ ಕಾಳಪ್ಪ..

ಬೆಂಗಳೂರು ಜೂ 01:  ಕಾಂಗ್ರೆಸ್ ಹಿರಿಯ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯ ವಿಧಾನ ಪರಿಷತ್ ಮತ್ತು ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟವಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ರಾಜ್ಯಸಭಾ ಟಿಕೆಟ್ ವಂಚಿತ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬ್ರಿಜೇಶ್ ಕಾಳಪ್ಪ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಮ್ಮ ರಾಜೀನಾಮೆ ಪತ್ರವನ್ನ ಸೋನಿಯಾ ಗಾಂಧಿಯವರಿಗೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡುವ ಕುರಿತು ಬ್ರಿಜೇಶ್ ಕಾಳಪ್ಪ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿನ ಮಾಹಿತಿಯನ್ನು ಬ್ರಿಜೇಶ್ ಕಾಳಪ್ಪ ಹಂಚಿಕೊಂಡಿದ್ದಾರೆ.

Related