ರಾಜ್ಯದಲ್ಲಿ ನ.17ರಿಂದ ಕಾಲೇಜುಗಳ ಪುನರಾರಂಭ

ರಾಜ್ಯದಲ್ಲಿ ನ.17ರಿಂದ ಕಾಲೇಜುಗಳ ಪುನರಾರಂಭ

ಬೆಂಗಳೂರು : ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ನ. 17ರಿಂದ ಕಾಲೇಜುಗಳ ಪುನರಾರಂಭಕ್ಕೆ ಅನುಮತಿಸಲಾಗಿದೆ. ಇಂತಹ ಕಾಲೇಜುಗಳ ಪುನರಾರಂಭದ ಕುರಿತಂತೆ ಅನೇಕ ಗೊಂದಲಗಳು ವಿದ್ಯಾರ್ಥಿಗಳಲ್ಲಿವೆ. ಇಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಶ್ನೋತ್ತರಗಳು ಈ ಕೆಳಗಿನಂತಿವೆ.

ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವುದು ಕಡ್ಡಾಯವಲ್ಲ. ಭೌತಿಕ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಗುವುದು. ಅಲ್ಲದೇ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರತಕ್ಕದ್ದು.

ಬಸ್ ಬಾಸ್‌ಗಳನ್ನು ಒದಗಿಸುವ ಕುರಿತು ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಕೆಎಸ್‌ಆರ್ ಟಿಸಿ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗಳನ್ನು ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಕೆಲವು ಹಾಸ್ಟೆಲ್ ಗಳ ನಿರ್ವಹಣೆ ಬೇರೆ ಇಲಾಖೆಗಳಿಗೆ ಸಂಬಂಧ ಪಟ್ಟ ವಿಚಾರವಾಗಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ, ಇಲಾಖೆಗಳ ಮಧ್ಯೆ ಸಂವಹನ ನಡೆಸುತ್ತಿದೆ. ಹೀಗೆ ಈ ಮೇಲಿನ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಉತ್ತರಿಸಿದ್ದು, ವಿದ್ಯಾರ್ಥಿಗಳ ಅನೇಕ ಗೊಂದಲಕ್ಕೆ, ಇದೀಗ ತೆರೆ ಎಳೆದಂತೆ ಆಗಿದೆ.

Related