ನಿವೃತ್ತ ಐಎಎಸ್ ಅಧಿಕಾರಿ ಬಿಜೆಪಿಗೆ ಸೇರ್ಪಡೆ

ನಿವೃತ್ತ ಐಎಎಸ್ ಅಧಿಕಾರಿ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಇಂದು ಬೆಂಗಳೂರಿನ ಬಿಜೆಪಿ ಪಕ್ಷದ ಕೇಂದ್ರ ಕಛೇರಿಯಲ್ಲಿ ರಾಜ್ಯ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್  ರವರು ಹಾಗೂ ಪ್ರದಾನ ಕಾರ್ಯದರ್ಶಿಗಳಾದ ಶ್ರೀಯತ ಸಿದ್ದರಾಜು ರವರ  ಸಮ್ಮುಖದಲ್ಲಿ, ಹಗರಿಬೊಮ್ಮನಹಳ್ಳಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಪಕ್ಷದ ಪ್ರಬಲ ಟಿಕೇಟ್ ಆಕಾಂಕ್ಷಿಗಳು ನಿವೃತ ಐಎಎಸ್ ಅಧಿಕಾರಿಗಳಾದ ಶ್ರೀಯುತ ಎಂ. ಲಕ್ಷ್ಮೀ ನಾರಾಯಣರವರು, IAS(R), ಬಿಜೆಪಿ ಕಚೇರಿಯಲ್ಲಿ ಪಕ್ಷದ ತತ್ವ ಮತ್ತು ಸಿದ್ದಾಂತಗಳನ್ನು ಒಪ್ಪಿಕೊಂಡು ರಾಜ್ಯಾಧ್ಯಕ್ಷರ  ಸಮ್ಮುಖದಲ್ಲಿ ಸೇರ್ಪಡೆಯಾದ ಕ್ಷಣ.

ನಂತರ ಮಾತನಾಡಿ ಮುಂದಿನ ದಿನಮಾನದಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ನಾವೆಲ್ಲರು ಸೇರಿ ಶತಾಯಗತಾಯ ಪ್ರಯತ್ನಿಸುತ್ತೆನೆ ಎಂದು ರಾಜ್ಯಾಧ್ಯಕ್ಷರಿಗೆ ಭರವಸೆ ನೀಡಿಡೆನು.

Related