ರೇವಣ್ಣಗೆ 7 ದಿನಗಳ ಕಾಲ ನ್ಯಾಯಾಂಗ ಬಂಧನ

ರೇವಣ್ಣಗೆ 7 ದಿನಗಳ ಕಾಲ ನ್ಯಾಯಾಂಗ ಬಂಧನ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಈಗ ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಹೌದು, ಕಳೆದ ನಾಲ್ಕು ದಿನಗಳಿಂದ ವಿಚಾರಣೆಗೆ ಒಳಪಟ್ಟಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಇಂದು ಎಸ್ಐಟಿ ಅಧಿಕಾರಿಗಳು  ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ.

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.08) ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್​ ಆದೇಶಿಸಿದೆ. ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನಲೆ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯುತ್ತಿದ್ದಾರೆ.

ಇದನ್ನೂ ಓದಿ: ಎಚ್ ಡಿ ರೇವಣ್ಣ ಜೈಲು ಪಾಲು

ಇನ್ನು ರೇವಣ್ಣ ಪರ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಎಂದು ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದರ. ಆದರೂ ಈ ಬಗ್ಗೆ ಎಸ್‌ಐಟಿ ಪ್ರತಿಕ್ರಿಯಿಸಲಿ ಅಂತಾ ಎಸ್​ಐಟಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಅದರಂತೆ ಇಂದು ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

 

Related