ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಈಗಾಗಲೇ ಎಸ್ ಐ ಟಿ ಅಧಿಕಾರಿಗಳು ಬಿರುಸಿನ ತನಿಖೆಯನ್ನು ಕೈಗೊಂಡಿದ್ದು, ಇದರಲ್ಲಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಅದರಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ನಿನ್ನೆ ಶು(ಕ್ರವಾರ ಮೇ 3) ರಂದು ವಿಚಾರಣೆಗೆ ಹಾಜರಾಗಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ.

ಹೌದು, ಪ್ರಜ್ವಲ್‌ ಲೈಂಗಿಕ ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ರೇವಣ್ಣ ಅವರು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.

ಎಚ್‌ ಡಿ ರೇವಣ್ಣ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ವಿಚಾರಣೆ ನಡೆಸಿದರು.

ಇದ್ದನ್ನೂ ಓದಿ: ಮೈತ್ರಿಯಲ್ಲಿ ಬಿರುಕುಂಟಾಯ್ತಾ?

ವಿಚಾರಣೆಯಲ್ಲಿ ಭಾಗಿಯಾದ ವಿಶೇಷ ತನಿಖಾ ದಳದ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ಎನ್‌ ಜಗದೀಶ್‌ ಅವರು ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಯಾವುದೇ ಹೊಸ ಸೆಕ್ಷನ್‌ಗಳನ್ನು ಅನ್ವಯಿಸಿಲ್ಲ. ರೇವಣ್ಣ ಅವರಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಅವರ ವಿರುದ್ಧದ ಆರೋಪಗಳು ಜಾಮೀನು ನೀಡುವಂತಹವಾಗಿವೆ ಎಂದು ಮೆಮೊ ಸಲ್ಲಿಸಿದರು.

ಆಗ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ತಮ್ಮ ಅರ್ಜಿಯನ್ನು ಹಿಂಪಡೆಯುತ್ತಿದ್ದು, ಎಸ್‌ಪಿಪಿ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ನ್ಯಾಯಾಲಯಕ್ಕೆ ಕೋರಿದರು. ಇದನ್ನು ದಾಖಲಿಸಿಕೊಂಡ ನ್ಯಾಯಾಲಯವು ಅರ್ಜಿ ಇತ್ಯರ್ಥಪಡಿಸಿತು.

Related