ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಪರಿಶೀಲನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಪರಿಶೀಲನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮಾನ್ಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಶಾಲಿನಿ ರಜನೀಶ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋರಮಂಗಲ ರಾಜಕಾಲುವೆ(ಕೆ-100) ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗಿನ 9.2 ಕಿ.ಮೀ ಉದ್ದದ ರಾಜಕಾಲುವೆಯಲ್ಲಿ ಜಲಮಾರ್ಗ ಯೋಜನೆ ಕಾಮಗಾರಿ ಪ್ರಗತಿ ಕುರಿತಂತೆ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಂಬಾರಗುಂಡಿ ಬಳಿ ರಾಜಕಾಲುವೆಯಲ್ಲಿ ಹರಿಯುವ ನೀರನ್ನು ಶುದ್ಧೀಕರಿಸಲು ನಿರ್ಮಸುತ್ತಿರುವ 05 ಎಂ.ಎಲ್.ಡಿ ಎಸ್.ಟಿ.ಪಿಯ(ತ್ಯಾಜ್ಯ ನೀರು ಸಂಸ್ಕರಣಾ ಘಟಕ) ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಕೂಡಲೆ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಿ ಘಟಕವನ್ನು ಕಾರ್ಯಾರಂಭಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬನ್ನೇರಘಟ್ಟ ಮುಖ್ಯ ರಸ್ತೆ ವಿಲ್ಸನ್ ಗಾರ್ಡನ್ ಹತ್ತಿರ ರಾಜಕಾಲುವೆ ಅಭಿವೃದ್ಧಿಕಾರ್ಯವನ್ನು ಪರಿಸೀಲಿಸಿದ ಬಳಿಕ ಮಾರಪ್ಟ ಗಾರ್ಡನ್ ಬಳಿ ರಾಜಕಾಲುವೆ ಪಕ್ಕದಲ್ಲಿ ಒತ್ತುವರಿಯಾಗಿರುವ ಪ್ರದೇಶವನ್ನು ಪರಿಶೀಲಿಸಿ ಸರ್ವೇ ಮಾಡಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿ ರವರಿಗೆ ಸೂಚನೆ ನೀಡಿದರು.

ಇಂಟರ್ ಮೀಡಿಯೆಟ್ ಸೀವೆಜ್ ಪಂಪಿಂಗ್ ಸ್ಟೇಷನ್ ನಿರ್ಮಾಣ:

ಶಾಂತಿನಗರ ಬಸ್ ನಿಲ್ದಾಣದ ಬಳಿ ನಾಗರಿಕ ಜಲಮಾರ್ಗ ಪರಿಶೀಲನೆಯ ವೇಳೆ ರಾಜಕಾಲುವೆಗೆ ತ್ಯಾಜ್ಯನೀರು ಬರುತ್ತಿರುವುದನ್ನು ಗಮನಿಸಿ, ರಾಜಕಾಲುವೆಗೆ ತ್ಯಾಜ್ಯ ನೀರು ಬರುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಅದಕ್ಕಾಗಿ ಜಲಮಂಡಳಿಯು ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಈ ವೇಳೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಶ್ರೀ ದಯಾನಂದ್, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರಹ್ಲಾದ್, ಪಾಲಿಕೆ ಹಾಗೂ ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related