ಖುರ್ಚಿಗಾಗಿ ಕಚ್ಚಾಟ : ಸಚಿವ

ಖುರ್ಚಿಗಾಗಿ ಕಚ್ಚಾಟ : ಸಚಿವ

ಮೈಸೂರು : ಕಾಂಗ್ರೆಸ್ ನಾಯಕರು ಮೊದಲು ಅವರ ನಡುವಿನ ಗೊಂದಲ ಬಗೆಹರಿಸಿಕೊಳ್ಳಲಿ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಪ್ರಯತ್ನ ಪಡುತ್ತಿದ್ದಾರೆ. ಶಿವಕುಮಾರ್ ಅವರನ್ನು ಕೆಳಗಿಳಿಸಲು ಸಿದ್ದರಾಮಯ್ಯ ಅವರು ಪ್ರಯತ್ನ ಪಡುತ್ತಿದ್ದಾರೆ.

ಇದನ್ನು ಮುಚ್ಚಿಕೊಳ್ಳಲು ಅವರು ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಇಲ್ಲಸಲ್ಲದ ಹೇಳಿಕೆ ಕೊಡುತ್ತಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಬಿಜೆಪಿಯಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಅವರ ಖುರ್ಚಿಯನ್ನು ಉಳಿಸಿಕೊಂಡರೆ ಸಾಕು. ಹಾಗಾಗಿ ಬಿಜೆಪಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಚಿವರು ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ ಗೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆಯೇ ಪರಸ್ಪರ ಉತ್ತಮ ಬಾಂಧವ್ಯ ಇಲ್ಲ. ಒಬ್ಬರಿಗೊಬ್ಬರು ಅಧಿಕಾರವನ್ನು ಕಿತ್ತುಕೊಳ್ಳಲು ಬಡಿದಾಡುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

Related