ಮಾಂಟೆಸ್ಸರಿ ಸ್ಕೂಲ್ ಆನ್ ವೀಲ್ಸ್ ವಾಹನಗಳಿಗೆ ಚಾಲನೆ:

ಮಾಂಟೆಸ್ಸರಿ ಸ್ಕೂಲ್ ಆನ್ ವೀಲ್ಸ್ ವಾಹನಗಳಿಗೆ ಚಾಲನೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಮಕ್ಕಳಿಗೆ ವಿಧ್ಯಾಭ್ಯಾಸ ನೀಡುವ ನಿಟ್ಟಿನಲ್ಲಿ ಫ್ರೀಥಿಂಕಿಂಗ್ ಫೌಂಡೇಶನ್ ಸಂಸ್ಥೆಯು ಪಾಲಿಕೆಯ ಸಹಭಾಗಿತ್ವದಲ್ಲಿ “ಮಾಂಟೆಸ್ಸರಿ ಸ್ಕೂಲ್ ಆನ್ ವೀಲ್”(ಮನೆ ಬಾಗಿಲಿಗೆ ಶಾಲೆ) 1 ವಾಹನಕ್ಕೆ ಸಹಾಯಕ ಆಯುಕ್ತರು(ಶಿಕ್ಷಣ) ಉಮೇಶ್ ರವರು ಚಾಲನೆ ನೀಡಿದರು.


ಫ್ರೀಥಿಂಕಿಂಗ್ ಫೌಂಡೇಷನ್ ಸಂಸ್ಥೆ ಮತ್ತು ಬಿಬಿಎಂಪಿಯ ಸಹಭಾಗಿತ್ವದಲ್ಲಿ ವಿಶ್ವದ ಮೊದಲ ಮಾಂಟೆಸ್ಸರಿ ಸ್ಕೂಲ್ ಆನ್ ವೀಲ್ಸ್ ಅನ್ನು ಸ್ಥಾಪಿಸುತ್ತಿದೆ. ಇದರ ಉದ್ದೇಶ ಬೆಂಗಳೂರಿನ ಕೊಳೆಗೇರಿಗಳಲ್ಲಿ ವಾಸಿಸುವ 2.5 ರಿಂದ 6 ವರ್ಷ ವಯಸ್ಸಿನ ಅಂಚಿನಲ್ಲಿರುವ ಮಕ್ಕಳ ಆರಂಭಿಕ ಕಲಿಕೆಯನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ಕಾರ್ಯಕ್ರಮವಾಗಿದೆ.

ಮಕ್ಕಳಿಗೆ ಮಾಂಟೆಸ್ಸರಿ ವಿಧಾನದಲ್ಲಿ ಬೋಧನೆ ಮಾಡಲು ಶಿಕ್ಷಕರಿಗೆ ತರಬೇತಿಯನ್ನು ಸಹ ನೀಡಲಾಗಿರುತ್ತದೆ. ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮೊದಲ ಮಾಂಟೆಸ್ಸರಿ ವೀಲ್ಸ್ ಶಾಲೆಯನ್ನು ಮೇ 25, 2022 ರಂದು ಪ್ರಾರಂಭಿಸಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ಫ್ರೀಥಿಂಕಿಂಗ್ ಫೌಂಡೇಷನ್ ಸಂಸ್ಥೆ ವತಿಯಿಂದ ಮಕ್ಕಳಿಗೆ ಊಟದ ವ್ಯವಸ್ಥೆ ಮತ್ತು ಆರೋಗ್ಯ ತಪಾಸಣೆಗಳನ್ನು ಸಹ ನೀಡಲಾಗುತ್ತದೆ.

Related