ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ರೆಡಿ

ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ರೆಡಿ

ಬೆಂಗಳೂರು, ಫೆ.22 : ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯನ್ನು ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಸುಸೂತ್ರವಾಗಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ಟ್ವೀಟರ್ ಮೂಲಕ ಸ್ಪಷ್ಟೀಕರಣ ನೀಡಿರುವ ಸಚಿವರು, ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು, ಪೋಷಕರು ಗೊಂದಲ, ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

Related