ಸಾಮಾಜಿಕ ಕಾರ್ಯಗಳ ಮೂಲಕ ಜನರ ನೋವಿಗೆ ಸ್ಪಂದಿಸಿ

ಸಾಮಾಜಿಕ ಕಾರ್ಯಗಳ ಮೂಲಕ ಜನರ ನೋವಿಗೆ ಸ್ಪಂದಿಸಿ

ಉಚಿತ ಆರೋಗ್ಯ ಶಿಬಿರ, ಸಾಮೂಹಿಕ ವಿವಾಹ, ರಕ್ತದಾನ ಮೊದಲಾದ ಸಾಮಾಜಿಕ ಕಾರ್ಯಗಳ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸಗಳನ್ನು ಮಾಡುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಭಾನುವಾರ ಶ್ರೀನಿಧಿಗೌಡ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವಾ ಟ್ರಸ್ಟ್ ಮತ್ತು ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸಾ ಶಿಬಿರ, ರಕ್ತದಾನ ಹಾಗೂ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆ.ಸಿ.ನಾರಾಯಣಗೌಡರು ಮತ್ತು ಇತರೆ ಮುಖಂಡರು ಸೇರಿ ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಬಡವರು, ನೊಂದವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಈ ರೀತಿಯ ಕಾರ್ಯಕ್ರಮಗಳನ್ನು ಪ್ರತಿ ೬ ತಿಂಗಳಿಗೊಮ್ಮೆ ಮಾಡಬೇಕೆನ್ನುವುದು ನನ್ನ ಅಭಿಲಾಷೆಯಾಗಿದ್ದು, ಸಾರ್ವಜನಿಕರಿಗೆ ಬೇರೆ ಸಂದರ್ಭಗಳಲ್ಲಿ ಏನು ನೀಡಿದ್ದೇವೆ ಎನ್ನುವುದು ಮುಖ್ಯವಲ್ಲ. ಆದರೆ ಅನಾರೋಗ್ಯದ ಸಂದರ್ಭದಲ್ಲಿ ಯಾವ ರೀತಿಯಾಗಿ ಸ್ಪಂದಿಸಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ ಎಂದು ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

Related