ಸದಾನಂದ ಗೌಡ ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ: ಡಿಸಿಎಂ

ಸದಾನಂದ ಗೌಡ  ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ: ಡಿಸಿಎಂ

ಬೆಂಗಳೂರು: ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಟಿಕೆಟ್ ಗಾಗಿ ಬಾರಿ ಕಸರತ್ತು ನಡೆಸುತ್ತಿದ್ದಾರೆ ಆದರೆ ಬಿಜೆಪಿ ವರಿಷ್ಠರು ಸದಾನಂದ ಗೌಡರಿಗೆ ಈ ಬಾರಿ ಟಿಕೆಟ್ ನೀಡುತ್ತಾರೆ ಎಂಬ ಅನುಮಾನವೆಕ್ತವಾಗಿದೆ ಈ ಮಧ್ಯೆ ಸದಾನಂದ ಗೌಡ ಕಾಂಗ್ರೆಸ್ ಸೇರಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ನಡುವೆ ಡಿಸಿಎಂ ಡಿ ಕೆ ಶಿವಕುಮಾರ್ ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಹಲವು ಬಿಜೆಪಿ ನಾಯಕರು ನಮ್ಮನ್ನು ಭೇಟಿಯಾಗಿದ್ದಾರೆ ಎಂದಿದ್ದಾರೆ.

ಕಲ್ಬುರ್ಗಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಹಾಲೀ ಬಿಜೆಪಿ ಸಂಸದರು ಕೂಡ ನಮ್ಮನ್ನು ಭೇಟಿಯಾಗಿ ಚರ್ಚಿಸಿದ್ದಾರೆ ಈಗ ಅವರು ಹೆಸರನ್ನು ಬಹಿರಂಗಪಡಿಸಿಲ್ಲ ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದರು.

Related