ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಸರಿ ರಣಕಹಳೆ!

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಸರಿ ರಣಕಹಳೆ!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಗುತ್ತಿರುವ ಹಗರಣ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ ಇಂದು ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಸಿಎಂ ನಿವಾಸಕ್ಕೆ ಮೂತಿಗೆ ಹಾಕಲು ಪ್ರಯತ್ನಿಸಿದ್ದಾರೆ.

ಹೌದು, ರಾಜ್ಯ ಕಾಂಗ್ರೆಸ್‌ ಸರ್ಕಾರದ ಹಗರಣ ಖಂಡಿಸಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ವಾಲ್ಮೀಕಿ ನಿಗಮದಲ್ಲಿ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತ; ಸಾವಿನ ಸಂಖ್ಯೆ 121 ಕ್ಕೆ ಏರಿಕೆ

ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುವುದನ್ನೇ ಕಾಯಕವಾಗಿರಿಸಿಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕರಾದ  ಆರ್.‌ ಅಶೋಕ್‌ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಿಜೆಪಿ ಶಾಸಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಗರದ ಶಿವಾನಂದ ವೃತ್ತದಿಂದ ಕಾಲ್ನಡಿಗೆ ಮೂಲಕ ಮುಖ್ಯಮಂತ್ರಿಯ ಸರಕಾರಿ ನಿವಾಸ ಕಾವೇರಿಯತ್ತ ತೆರಳಲು ಯತ್ನಿಸಿದಾಗ ಪೊಲೀಸರು ಬಿಜೆಪಿ ನಾಯಕರನ್ನು ತಡೆದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆಯಿತು.

ಪ್ರತಿಭಟನೆಯಲ್ಲಿ ಪೊಲೀಸರು ವಿಜಯೇಂದ್ರ, ಸಿ.ಟಿ.ರವಿ, ಸುರೇಶ್ ಕುಮಾರ್, ಅರವಿಂದ ಬೆಲ್ಲದ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕ ಸುರೇಶ್ ಗೌಡ, ಸುನೀಲ್ ಕುಮಾರ್ ಸೇರಿದಂತೆ ಇನ್ನಿತರರನ್ನು ವಶಕ್ಕೆ ಪಡೆದು ಬಸ್ ನಲ್ಲಿ ಕೂರಿಸಿ ಕರೆದೊಯ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

Related