ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ; ಸಿಎಂ ಹೇಳಿದ್ದೇನು..?

ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ; ಸಿಎಂ ಹೇಳಿದ್ದೇನು..?

ಬೆಂಗಳೂರು: ಇನ್ಮುಂದೆ ಅಂಗಡಿ ಮುಗಟುಗಳು ಮತ್ತು ಬಸ್ ನಿಲ್ದಾಣಗಳು ಇನ್ನಿತರ ಸ್ಥಳಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡಿದರೆ ನಿಮಗೆ ಬಾರಿ ಬೃಹತ್ ದಂಡ ಬೀಳುವುದರ ಜೊತೆಗೆ ಅತ್ಯಧಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಅವಧಿ ಮೀರಿದ ಪದಾರ್ಥಗಳನ್ನು ಮಾರಾಟ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾನೆ. ಇದನ್ನೂ ಓದಿ: ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು: ಸಿಎಂ‌

ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ  ಆಹಾರ ಪದಾರ್ಥಗಳ ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

 

Related